ಬಿಎಸ್‌ವೈ ಬಂಧನ ಕೋರಿ ಹೈಕೋರ್ಟ್‌ಗೆ ಅರ್ಜಿ | ಕೇಸ್‌ ರದ್ದು ಕೋರಿ ಪಿಟಿಷನ್‌ | ಏನಿದು ಕೇಸ್‌

writ petition has been filed in the High Court seeking the arrest of former CM BS Yediyurappa in connection with a POCSO case

ಬಿಎಸ್‌ವೈ ಬಂಧನ ಕೋರಿ ಹೈಕೋರ್ಟ್‌ಗೆ ಅರ್ಜಿ | ಕೇಸ್‌ ರದ್ದು ಕೋರಿ ಪಿಟಿಷನ್‌ | ಏನಿದು ಕೇಸ್‌
former CM BS Yediyurappa

SHIVAMOGGA | MALENADUTODAY NEWS | Jun 13, 2024  ಮಲೆನಾಡು ಟುಡೆ

ಪೋಕ್ಸೋ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪನವರನ್ನ ಬಂಧಿಸುವಂತೆ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಲಾಗಿದೆ.  ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ–2012)  ಅಡಿಯಲ್ಲಿ 53 ವರ್ಷದ ಮಹಿಳೆಯೊಬ್ಬರು ಯಡಿಯೂರಪ್ಪ ಅವರು ನನ್ನ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 2024ರ ಮಾರ್ಚ್‌ 14ರಂದು ಸದಾಶಿವ ನಗರ ಪೊಲೀಸ್‌ ಠಾಣೆಯಲ್ಲಿ ದೂರುಕೊಟ್ಟಿದ್ದರು. ಆ ಸಂಬಂಧ ಎಫ್‌ಐಆರ್‌ ದಾಖಲಾಗಿತ್ತು. ಅದೆ ಪ್ರಕರಣದಲ್ಲಿ ಮಹಿಳೆಯ ಮಗ ಇದೀಗ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದಾರೆ.  ಬಿ.ಎಸ್.ಯಡಿಯೂರಪ್ಪ ಅವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸಲು ಬೆಂಗಳೂರು ನಗರ ಪೊಲೀಸ್ ಕಮಿಷನರ್‌ ಅವರಿಗೆ ನಿರ್ದೇಶಿಸಬೇಕು ಎಂದು ಕೋರಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಲಾಗಿದೆ.  ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ನಿಗದಿಯಾಗಬೇಕಿದೆ

ತಡೆಕೋರಿ ಅರ್ಜಿ 

ಇನ್ನೊಂದೆಡೆ  ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಬಿ.ಎಸ್.ಯಡಿಯೂರಪ್ಪರವರು ಸಹ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ‘ನಾನು ಯಾವುದೇ ಕಾನೂನು ಬಾಹಿರ ಕೃತ್ಯ ಎಸಗಿಲ್ಲ. ಫಿರ್ಯಾದುದಾರ ಮಹಿಳೆಗೆ ದೂರು ನೀಡುವುದೇ ಹವ್ಯಾಸ. ಎಫ್‌ಐಆರ್‌ ದಾಖಲಾದ ನಂತರ ಏಪ್ರಿಲ್‌ 12ರಂದು ಪೊಲೀಸರ ವಿಚಾರಣೆಗೆ ಹಾಜರಾಗಿದ್ದೆ. ದೂರಿನಲ್ಲಿ ಅಪರಾಧದ ಅಂಶಗಳು ಇಲ್ಲದೇ ಇರುವುದರಿಂದ ಪ್ರಕರಣ ರದ್ದುಪಡಿಸಬೇಕು ಎಂದು ಬಿಎಸ್‌ ಯಡಿಯೂರಪ್ಪರವರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. 

A writ petition has been filed in the High Court seeking the arrest of former CM BS Yediyurappa in connection with a POCSO case.woman's son has filed a writ petition in the High Court seeking directions to the Bengaluru City Police Commissioner to arrest and investigate BS Yediyurappa.