ಯಶ್ ಅಭಿಮಾನಿಗಳಿಗೆ ಶಾಕ್: ಟಾಕ್ಸಿಕ್ ಬಿಡುಗಡೆ ಮುಂದೂಡಿಕೆ; ಹೊಸ ಡೇಟ್ ಫಿಕ್ಸ್! ಕಾರಣವೇನು

ಹಂಚಿಕೊಳ್ಳಿ
WhatsApp Facebook X Telegram
Yash Starrer Toxic Release Date Postponed
Yash Starrer Toxic Release Date Postponed

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ಟಾಕ್ಸಿಕ್ ನ ಬಿಡುಗಡೆಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ನಿರಾಸೆಯನ್ನು ಮೂಡಿಸಿದೆ..ಮಾರ್ಚ್ 19 ರಂದು ತೆರೆಕಾಣಬೇಕಿದ್ದ  ಚಿತ್ರದ ಬಿಡುಗಡೆ ದಿನಾಂಕವನ್ನು ಈಗ ಅಧಿಕೃತವಾಗಿ ಮುಂದೂಡಲಾಗಿದೆ.

 ಹೌದು  ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ (Middle East) ಸದ್ಯ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿ ಹಾಗೂ ಅನಿಶ್ಚಿತತೆಯ ಕಾರಣದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನಿರ್ಮಾಣ ಸಂಸ್ಥೆ ಸ್ಪಷ್ಟಪಡಿಸಿದೆ. ಹಾಗೆಯೇ  ಜಾಗತಿಕ ಮಟ್ಟದಲ್ಲಿ ಅತಿ ಹೆಚ್ಚು ಪ್ರೇಕ್ಷಕರನ್ನು ತಲುಪುವ ಉದ್ದೇಶ ಹೊಂದಿರುವ ಚಿತ್ರತಂಡಕ್ಕೆ ಪ್ರಸ್ತುತ ಪರಿಸ್ಥಿತಿ ಅಡ್ಡಿಯಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗೀತು ಮೋಹನ್‌ದಾಸ್ ನಿರ್ದೇಶನದ ಈ ಚಿತ್ರವು ಇದೀಗ ಜೂನ್ 4, 2026 ರಂದು ವಿಶ್ವದಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಚಿತ್ರೀಕರಣಗೊಂಡಿರುವ ಈ ಸಿನಿಮಾ, ಭಾರತದ ಎಲ್ಲಾ ಪ್ರಮುಖ ಭಾಷೆಗಳಲ್ಲಿಯೂ ತೆರೆಕಾಣಲಿದೆ. ಕಿಯಾರಾ ಅಡ್ವಾಣಿ, ತಾರಾ ಸುತಾರಿಯಾ ಮತ್ತು ನಯನತಾರಾ ಅವರಂತಹ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದು, ಕೆಜಿಎಫ್-2 ನಂತರ ಯಶ್ ಅವರ ಬಿಗ್ ಕಂಬ್ಯಾಕ್ ಇದಾಗಲಿದೆ. 

Yash Starrer Toxic Release Date Postponed

Yash Starrer Toxic Release Date Postponed
Yash Starrer Toxic Release Date Postponed
shivamogga car decor sun control house
shivamogga car decor sun control house
ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor