ಶಿವಮೊಗ್ಗ ಸೇರಿ 10 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್; ಗುಡುಗು-ಸಿಡಿಲು ಸಹಿತ ಭಾರಿ ಮಳೆ ಸಾಧ್ಯತೆ

ಹಂಚಿಕೊಳ್ಳಿ
WhatsApp Facebook X Telegram
Yellow Alert for Shivamogga and 9 Other Karnataka Districts as Heavy Rain Forecast Continues
Yellow Alert for Shivamogga and 9 Other Karnataka Districts as Heavy Rain Forecast Continues

ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇವತ್ತು ಸಹ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ನಿಟ್ಟಿನಲ್ಲಿ ಶಿವಮೊಗ್ಗ ಸೇರಿದಂತೆ ರಾಜ್ಯದ 10 ಜಿಲ್ಲೆಗಳಿಗೆ ಭಾರಿ ಮಳೆ, ಗುಡುಗು ಹಾಗೂ ಸಿಡಿಲಿನ ಯಲ್ಲೋ ಅಲರ್ಟ್ ನೀಡಿದೆ. ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ 64.5 ಮಿ.ಮೀ.ನಿಂದ 115.5 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ವಿಜಯನಗರ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯೊಂದಿಗೆ ಗುಡುಗು ಮತ್ತು ಗಂಟೆಗೆ 30ರಿಂದ 40 ಕಿ.ಮೀ. ವೇಗದ ಬಿರುಸಿನ ಗಾಳಿ ಬೀಸುವ ಸಾಧ್ಯತೆಯಿದೆ.

ಭಾರತ್ ಜೋಡೋ ಯಾತ್ರೆ 2.0
  • ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಹಾಗೂ ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯ ಕೆಲವೆಡೆ ಗುಡುಗು ಮತ್ತು ಸಿಡಿಲಿನೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
  • ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈ ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಸಿನ ಗಾಳಿಯೂ ಬೀಸಬಹುದು.
  • ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರುವ ಸಾಧ್ಯತೆಯಿದೆ ಎಂದು ಮುನ್ಸೂಚನೆಯಲ್ಲಿ ತಿಳಿಸಲಾಗಿದೆ.
  • ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲ ಸಮಯ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಬಿರುಸಿನ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor