ಇನ್ನೊಂದು ವಾರ ಮಳೆ! ಯಲ್ಲೋ ಅಲರ್ಟ್! ಬಿರುಗಾಳಿ ಜೊತೆಗೆ ವರುಣಾಬ್ಬರ ಸೂಚನೆ! ಇಲ್ಲಿದೆ ಹವಾಮಾನ ವರದಿ ಓದಿ

ಮಲೆನಾಡು ಟುಡೆ ಸುದ್ದಿ / ಬೆಂಗಳೂರು / ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬಿಡುಗಡೆ ಮಾಡಿರುವ ಬುಲೆಟಿನ್ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಚದುರಿದಂತೆ ಮಳೆಯಾಗಿದೆ.

ಇವತ್ತು ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡು ಕರ್ನಾಟಕದ ಬೆಳಗಾವಿ, ಧಾರವಾಡ, ಗದಗ, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ವಿಜಯಪುರ, ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದ ಗಾಳಿ ಬೀಸಲಿದ್ದು, ಸಾಧಾರಣ ಮಳೆಯಾಗಲಿದೆ. ಕೊಪ್ಪಳ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ದಕ್ಷಿಣ ಒಳನಾಡು ಮತ್ತು ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬಳ್ಳಾರಿ, ಬೆಂಗಳೂರು ದಕ್ಷಿಣ, ಚಾಮರಾಜನಗರ, ವಿಜಯನಗರ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಜಲಾಶಯಗಳಲ್ಲಿನ ನೀರಿನ ಸಂಗ್ರಹ

ಇನ್ನೂ ನಿನ್ನೆಯ ದಿನದಾಂತ್ಯಕ್ಕೆ ಲಿಂಗನಮಕ್ಕಿಯಲ್ಲಿ 27.04 ಟಿಎಂಸಿ, ಸೂಪಾದಲ್ಲಿ 34.81 ಟಿಎಂಸಿ, ವಾರಾಹಿಯಲ್ಲಿ 7.82 ಟಿಎಂಸಿ, ಹಾರಂಗಿಯಲ್ಲಿ 2.99 ಟಿಎಂಸಿ, ಹೇಮಾವತಿಯಲ್ಲಿ 15.23 ಟಿಎಂಸಿ ಮತ್ತು ಕೃಷ್ಣರಾಜ ಸಾಗರದಲ್ಲಿ 14.15 ಟಿಎಂಸಿ ನೀರಿನ ಸಂಗ್ರಹವಿದೆ. ಅದೇ ರೀತಿ ಕಬಿನಿಯಲ್ಲಿ 5.34 ಟಿಎಂಸಿ, ಭದ್ರಾದಲ್ಲಿ 25.18 ಟಿಎಂಸಿ, ತುಂಗಭದ್ರಾದಲ್ಲಿ 8.40 ಟಿಎಂಸಿ, ಘಟಪ್ರಭಾದಲ್ಲಿ 13.05 ಟಿಎಂಸಿ, ಮಲಪ್ರಭಾದಲ್ಲಿ 11.29 ಟಿಎಂಸಿ, ಆಲಮಟ್ಟಿಯಲ್ಲಿ 23.75 ಟಿಎಂಸಿ, ನಾರಾಯಣಪುರದಲ್ಲಿ 17.15 ಟಿಎಂಸಿ ಹಾಗೂ ವಾಣಿ ವಿಲಾಸ ಸಾಗರದಲ್ಲಿ 23.02 ಟಿಎಂಸಿ ನೀರು ಸಂಗ್ರಹವಾಗಿದೆ.

ಇನ್ನೊಂದು ವಾರ ಮಳೆ! ಯಲ್ಲೋ ಅಲರ್ಟ್!

ಇದಷ್ಟೆ ಅಲ್ಲದೆ ಬುಧವಾರದಿಂದ ಮುಂದಿನ ಒಂದು ವಾರ ಭಾರಿ ಗಾಳಿ ಸಹಿತ ಸಾಧಾರಣ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಬೀದರ್, ಕಲಬುರಗಿ, ಯಾದಗಿರಿ ಹಾಗೂ ವಿಜಯಪುರ ಜಿಲ್ಲೆ ಬಿಟ್ಟು, ರಾಜ್ಯದ ಉಳಿದ ಎಲ್ಲ ಜಿಲ್ಲೆಗಳಿಗೆ ಬುಧವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw