ಇವತ್ತು ನಾಳೆ ಶಿವಮೊಗ್ಗದಲ್ಲಿ ಯಲ್ಲೋ ಅಲರ್ಟ್! ಗುಡುಗು, ಮಿಂಚು, ಬಿರುಗಾಳಿ ಜೊತೆ ಭಾರೀ ಮಳೆಯ ಎಚ್ಚರಿಕೆ!

Malenadu Today

KARNATAKA NEWS/ ONLINE / Malenadu today/ Jul 14, 2023 SHIVAMOGGA NEWS

ಶಿವಮೊಗ್ಗ ಜಿಲ್ಲೆಯು ಸೇರಿದಂತೆ , ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,  ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಲ್ಲ ಇವತ್ತು ಯಲ್ಲೋ ಅಲರ್ಟ್​ ಘೋಷಿಸಲಾಗಿದೆ. ಐಎಂಡಿ ಬೆಂಗಳೂರು (.IMD Bangalore ) ವೆಬ್​ಸೈಟ್​  ಮಾಹಿತಿ ಪ್ರಕಾರ, ಶಿವಮೊಗ್ಗದಲ್ಲಿ ಇವತ್ತು ಮತ್ತು ನಾಳೆ ಯಲ್ಲೋ ಅಲರ್ಟ್ ಘೋಷಣೆಯಾಗಿದೆ. ಸುಮಾರು 65 ಮಿಲಿಮೀಟರ್​ನಿಂದ-115 ಮಿಲೀಮೀಟರ್​ನವರೆಗೂ ಮಳೆಯಾಗಲಿದೆ ಎಂದು ತಿಳಿಸಲಾಗಿದೆ. ಇನ್ನೂ ಬಾರಿ ಮಳೆಯ ಜೊತೆಗೆ ಗುಡುಗು ಮಿಂಚು ಬಿರುಗಾಳಿಯ ಆರ್ಭಟ ಇರಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಶಿವಮೊಗ್ಗವಷ್ಟೆ ಅಲ್ಲದೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.  ಬಿರುಗಾಳಿಯ ವೇಗವು ಗಂಟೆಗೆ 40-45 ಕಿ.ಮೀ ಇರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. 

 

Share This Article