Yellow Alert Issued for 9 Districts ಶಿವಮೊಗ್ಗ, malenadu today news : ಹವಾಮಾನ ವರದಿ: ಶಿವಮೊಗ್ಗವೂ ಸೇರಿದಂತೆ ರಾಜ್ಯದ ವಿವಿದೆಡೆ ಇನ್ನೂ ಮೂರರಿಂದ ಐದು ದಿನಗಳ ಕಾಲ ಮಳೆಯಾಗುವ ಮನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಎಂದು ಮನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ 9 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ.

ಶಿವಮೊಗ್ಗವೂ ಸೇರಿದಂತೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಬೆಳಗಾವಿ, ಬೀದರ್, ಕಲಬುರಗಿ, ವಿಜಯಪುರ, ಚಿಕ್ಕಮಗಳೂರು ಜಿಲ್ಲೆಗಳಿಗೆ ಇವತ್ತು ನಾಳೆ ಯಲ್ಲೋ ಅಲರ್ಟ್ ನೀಡಲಾಗಿದೆ. ಅಲ್ಲದೆ ಮುಂದಿನ 5 ದಿನಗಳ ಕಾಲ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಲಾಗಿದೆ. ಇನ್ನೂ ಬೆಂಗಳೂರಿನಲ್ಲಿಯು ವ್ಯಾಪಕ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಲಾಗಿದೆ

ಈ ನಡುವೆ ರಾಜ್ಯದಲ್ಲಿ ವಾಡಿಕೆಗಿಂತ ಒಂಬತ್ತು ಪರ್ಸೆಂಟ್ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಸಿ.ಎಸ್.ಪಾಟೀಲ್ ತಿಳಿಸಿದ್ದು, ಕರಾವಳಿಯಲ್ಲಿ 2%, ಉತ್ತರ ಒಳನಾಡಿನಲ್ಲಿ 37% ಹಾಗೂ ದಕ್ಷಿಣ ಒಳನಾಡಿನಲ್ಲಿ 3% ಹೆಚ್ಚುವರಿ ಮಳೆಯಾಗಿದೆ ಎಂದು ಅವರು ತಿಳಿಸಿದ್ದಾರೆ.