ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 29, 2025: ರಾಜ್ಯದಲ್ಲಿ ಇವತ್ತು ಸಹ ಮಳೆ ಮುಂದುವರಿಯಲಿದೆ ಅಂತಾ ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 30ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಶಿವಮೊಗ್ಗದಲ್ಲಿ ನಡೆಯುತ್ತಿದ್ದಿದ್ದು ಸಾಗರದಲ್ಲಿಯು ಶುರುವಾಯ್ತು! ದಾಖಲಾಯ್ತು ಕೇಸ್
ಕರಾವಳಿಯಲ್ಲಿ ಗಂಟೆಗೆ 45ರಿಂದ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದ್ದು, ಈ ಅವಧಿಯಲ್ಲಿ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

ಇನ್ನೂ ಇವತ್ತು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
ಶಿಕಾರಿಪುರ : ಶಾಲೆ ಆವರಣದಲ್ಲಿದ್ದ ಮಕ್ಕಳ ಮೇಲೆ ಜೇನು ದಾಳಿ!
ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಅ.30ರಂದು ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು ಟುಡೆ ಡಿಜಿಟಲ್ ನ್ಯೂಸ್ ಮೀಡಿಯಾ ಶಿವಮೊಗ್ಗವನ್ನೂ ಕೇಂದ್ರಿಕರಿಸಿಕೊಂಡು ಸ್ಥಳೀಯ ವಿಷಯಗಳಿಂದ ಸಕಲ ವಿಚಾರಗಳನ್ನು ಜನರಿಗೆ ಮುಟ್ಟಿಸುವ ಮಾಹಿತಿ ಸಂಸ್ಥೆಯಾಗಿದೆ. ನೀವು ನಮ್ಮನ್ನು Facebook whatsapp whatsapp chanel instagram youtube telegram google business malenadu today epaper malenadutoday web ನಲ್ಲಿ ಬೆಂಬಲಿಸಬಹುದು.. ಸಾದ್ಯವಾದಷ್ಟು ನಮ್ಮ ಪ್ರಯತ್ನಕ್ಕೆ ನಿಮ್ಮ ಬೆಂಬಲವನ್ನು ನೀಡಿ..ಇಲ್ಲಿ ನಿಮ್ಮ ಸಹಕಾರವೇ ಮುಖ್ಯ!
