youth congress : 2 ವರ್ಷ ನೂರು ಹರ್ಷ ಕಿರು ಹೊತ್ತಿಗೆ ಬಿಡುಗಡೆ ಮಾಡಿದ ಯೂತ್ ಕಾಂಗ್ರೆಸ್
ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರ ಕಾರ್ಯವೈಖರಿಯ ಕುರಿತಾಗಿ ಜಿಲ್ಲಾ ಯುವ ಕಾಂಗ್ರೆಸ್ ಇಂದು 02 ವರ್ಷ ನೂರು ಹರ್ಷ ಎಂಬ ಕಿರು ಹೊತ್ತಿಗೆ ಕರಪತ್ರವನ್ನು ಬಿಡುಗಡೆ ಮಾಡಲಾಯಿತು.
youth congress : ಈ ಕುರಿತು ಸೂಡಾ ಸದಸ್ಯ ಪ್ರವೀಣ್ ಪತ್ರಿಕಾ ಭವನದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿ ಕಾಂಗ್ರೆಸ್ ಸರ್ಕಾರ 2 ವರ್ಷ ಯಶಸ್ವಿಯಾಗಿ ಪೂರೈಸಿದೆ. ನಮ್ಮ ಸರ್ಕಾರ ಚುನಾವಣಾ ಪೂರ್ವದಲ್ಲಿ ನೀಡಿದ ಪಂಚ ಗ್ಯಾರಂಟಿ ಗಳ ಯೋಜನೆಯನ್ನು ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದೇವೆ. ಈ ಹಿನ್ನಲೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕಾರ್ಮಿಕ ಸಚಿವರಾಗಿ ಅಧಿಕಾರವನ್ನು ವಹಿಸಿಕೊಂಡರು. ಅವರು ಅಧಿಕಾರ ವಹಿಸಿಕೊಂಡ ನಂತರ ಕಾರ್ಮಿಕ ವಲಯದಲ್ಲಿ ಹೆಚ್ಚಿನ ಅಭಿವೃದ್ದಿಯನ್ನು ಕೈಗೊಳ್ಳಲು ಸಾಧ್ಯವಾಯಿತು. ಗಿಕ್ ಕಾರ್ಮಿಕರಿಗೆ ಜೀವ ವಿಮೆ ಮತ್ತು ಅಪಘಾತ ವಿಮೆ, ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆ, 100 ಕ್ಕೂ ಹೆಚ್ಚು ಹೈಟೆಕ್ ಸಂಚಾರಿ ವಾಹನಗಳು ಸೇರಿದಂತೆ ಕಾರ್ಮಿಕರ ಶ್ರೇಯೋಭಿವೃದ್ದಿಗಾಗಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರ 02 ವರ್ಷದ ಸಾಧನೆಯ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಯುವ ಕಾಂಗ್ರೆಸ್ ಮುಖಂಡರು ಇಂದು 2 ವರ್ಷ ನೂರು ಹರ್ಷ ಎಂಬ ಕಿರು ಹೊತ್ತಿಗೆ ಕರಪತ್ರವನ್ನು ಬಿಡುಗಡೆ ಮಾಡುತ್ತಿದ್ದೇವೆ ಎಂದು ಹೇಳಿದರು.
ನಂತರ 8 ಪುಟಗಳ 2 ವರ್ಷ ನೂರು ಹರ್ಷ ಎಂಬ ಕಿರು ಹೊತ್ತಿಗೆ ಕರ ಪತ್ರವನ್ನು ಬಿಡುಗಡೆ ಮಾಡಲಾಯಿತು. ಈ ಕರಪತ್ರದಲ್ಲಿ 2 ವರ್ಷದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಇಲಾಖೆಯಲ್ಲಿ ಕೈಗೊಂಡ ಅಭಿವೃದ್ದಿ ಕಾರ್ಯಗಳ ಬಗ್ಗೆ ನಮೂದಿಸಿದ್ದರು. ಈ ಸಂದರ್ಭದಲ್ಲಿ ಎಚ್.ಪಿ.ಗಿರೀಶ್, ರಂಗನಾಥ್, ಲೋಕೇಶ್, ಶರತ್ ಮರಿಯಪ್ಪ, ಶರತ್, ಇರ್ಫಾನ್ ಖಾನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
