ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ನಿವಾಸಕ್ಕೆ ಯುವ ಕಾಂಗ್ರೆಸ್​ ಕಾರ್ಯರ್ತರು ಮುತ್ತಿಗೆ ಯತ್ನ, ಕಾರಣವೇನು

ಹಂಚಿಕೊಳ್ಳಿ
WhatsApp Facebook X Telegram
Youth Congress Siege MP BY Raghavendra’s House
Youth Congress Siege MP BY Raghavendra’s House

Youth Congress ಶಿವಮೊಗ್ಗ : ನೀಟ್-ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿ ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಸಂಸದ ಬಿ.ವೈ. ರಾಘವೇಂದ್ರ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು.

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಕಾರ್ಯಾಧ್ಯಕ್ಷರಾಗಿ ನರಸಿಂಹ ಗಂಧದಮನೆ ನೇಮಕ

ಶಿವಮೊಗ್ಗದ ವಿನೋಬನಗರದಲ್ಲಿರುವ ಸಂಸದರ ನಿವಾಸದ ಮುಂದೆ ಜಮಾಯಿಸಿದ ನೂರಾರು ಪ್ರತಿಭಟನಾಕಾರರು, ಕೇಂದ್ರ ಬಿಜೆಪಿ ಸರ್ಕಾರದ ವೈಫಲ್ಯದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರಾಜಸ್ಥಾನ ಹಾಗೂ ಉತ್ತರಾಖಾಂಡ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ವದಂತಿಗಳ ಬೆನ್ನಲ್ಲೇ ಪಾರದರ್ಶಕತೆ ಕಾಪಾಡಲು ವಿಫಲವಾಗಿರುವ ಕೇಂದ್ರ ಸರ್ಕಾರ ಪರೀಕ್ಷೆಯನ್ನೇ ರದ್ದುಗೊಳಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳ ಕನಸಿಗೆ ತಣ್ಣೀರೆರಚಿದಂತಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು. 

ಪ್ರತಿಭಟನೆಯ ತೀವ್ರತೆ ಹೆಚ್ಚಾದಂತೆ, ಯುವ ಕಾಂಗ್ರೆಸ್ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ತಳ್ಳಿ ಸಂಸದರ ಮನೆಗೆ ನುಗ್ಗಲು ಪ್ರಯತ್ನಿಸಿದರು. ಈ ವೇಳೆ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದರು. ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ತಳ್ಳಾಟ-ನೂಕಾಟ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ನಂತರ ಪೊಲೀಸರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರ್ಷಿತ್ ಗೌಡ ಸೇರಿದಂತೆ ಹಲವರನ್ನು ವಶಕ್ಕೆ ಪಡೆದು ಕರೆದೊಯ್ದರು.

ಯುಪಿಎ ಸರ್ಕಾರದ ಅವಧಿಯಲ್ಲಿ ಮೆರಿಟ್ ಆಧಾರದ ಮೇಲೆ ಜಾರಿಗೆ ತಂದ ನೀಟ್ ವ್ಯವಸ್ಥೆಯು ಇಂದು ಕೋಚಿಂಗ್ ಮಾಫಿಯಾ ಹಾಗೂ ಅಕ್ರಮಗಳ ಕೂಪವಾಗಿ ಬದಲಾಗಿದೆ ಎಂದು ನಾಯಕರು ಆರೋಪಿಸಿದರು. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಪೋಷಕರ ನಂಬಿಕೆ ದ್ರೋಹ ಮಾಡಿರುವ ಈ ಸರ್ಕಾರವನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಪ್ರಸನ್ನ ಕುಮಾರ್, ಜವಳಿ ನಿಗಮದ ಅಧ್ಯಕ್ಷ ಚೇತನ್ ಸೇರಿದಂತೆ ನೂರಾರು ಯುವ ಮುಖಂಡರು ಭಾಗವಹಿಸಿದ್ದರು.

Youth Congress Siege MP BY Raghavendra’s House

ಹಂಚಿಕೊಳ್ಳಿ
WhatsApp Facebook X Telegram
Prathapa thirthahalli
ಲೇಖಕರ ಬಗ್ಗೆ

Prathapa thirthahalli

Malenadu Today Contributor