ಶಿಕಾರಿಗೆ ತೆರಳಿದ್ದ ವೇಳೆ ಫೈರಿಂಗ್! ಬುಲೆಟ್ತ ತಗುಲಿ ಯುವಕ ದುರ್ಮರಣ: ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಹಂಚಿಕೊಳ್ಳಿ
WhatsApp Facebook X Telegram
ಅಪರಾಧ ಸುದ್ದಿಗಳಿಗೆ ಸಂಬಂಧಿಸಿದ ಸಾಂದರ್ಭಿಕ ಚಿತ್ರ
crime news image malenadutoday

ಮಲೆನಾಡು ಟುಡೆ ಸುದ್ದಿ / ಚಿಕ್ಕಮಗಳೂರು /ಜಿಲ್ಲೆಯ ಕೊಪ್ಪ ತಾಲೂಕಿನ ಕಡೇಮನೆ ಗ್ರಾಮದ ಯುವಕನೊಬ್ಬ ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಫೈರಿಂಗ್ ಆಗಿದೆಯಷ್ಟೆ ಅಲ್ಲದೆ, ಬುಲೆಟ್ ತಗುಲಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಗುಂಡೇಟಿನಿಂದ ಸಾವನ್ನಪ್ಪಿದ ಯುವಕನನ್ನ 26 ವರ್ಷದ ಚೇತನ್ ಎಂದು ಗುರುತಿಸಲಾಗಿದೆ.

ಮೊನ್ನೆ ಗುರುವಾರ ರಾತ್ರಿ ಈ ಘಟನೆ ನಡೆದಿದೆ. ಒಟ್ಟು 7 ಸ್ನೇಹಿತರ ತಂಡ ಕಾಡಿಗೆ ಬೇಟೆಗೆಂದು ತೆರಳಿತ್ತು. ಈ ವೇಳೆ ಅನಿರೀಕ್ಷಿತವಾಗಿ ಗುಂಡು ಹಾರಿದೆ. ಅದು ನೇರವಾಗಿ ಚೇತನ್ ಅವರಿಗೆ ತಗುಲಿದೆ. ಪರಿಣಾಮ ಚೇತನ್ ಸ್ಥಿತಿ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನ ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತಾದರೂ, ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾನೆ.

ಪ್ರಾಥಮಿಕ ಹಂತದಲ್ಲಿ ಪೊಲೀಸರು ಮೃತದೇಹವನ್ನ ಆಸ್ಪತ್ರೆಗೆ ತಂದ ಮೂವರು ಯುವಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಿಕಾರಿಗೆ ತೆರಳಿದ್ದ 7 ಜನರ ತಂಡದಲ್ಲಿದ್ದ ಉಳಿದ ಮೂವರು ನಾಪತ್ತೆಯಾಗಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಕೇಸ್ ಆಗಿದೆ.

ವಿಷಯಗಳು:
ಹಂಚಿಕೊಳ್ಳಿ
WhatsApp Facebook X Telegram
Ajjimane Ganesh
ಲೇಖಕರ ಬಗ್ಗೆ

Ajjimane Ganesh

Malenadu Today Contributor