ಸೀಗೆಹಟ್ಟಿ / 22 ವರುಷದ ಯುವಕ ನೇಣಿಗೆ ಶರಣು, ಕಾರಣ ಹೀಗಿದೆ

ಹಂಚಿಕೊಳ್ಳಿ
WhatsApp Facebook X Telegram
ದೊಡ್ಡಪೇಟೆ ಪೊಲೀಸ್ ಸ್ಟೇಷನ್ ಶಿವಮೊಗ್ಗದ ಸಾಂದರ್ಭಿಕ ಚಿತ್ರ

Life in Shivamogga / ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ಮನೆಯಲ್ಲೇ ನೇಣು ಬಿಗಿದುಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಿಗೇಹಟ್ಟಿ ಸಮೀಪದ ಕೆರೆದುರ್ಗಮ್ಮನ ಕೇರಿಯಲ್ಲಿ ಗುರುವಾರ ನಡೆದಿದೆ.

ಮೃತನನ್ನು ಭುವನ್ ಸಿಂಗ್ (22) ಎಂದು ಗುರುತಿಸಲಾಗಿದೆ. ಇವರು ನಗರದ ಸೆಂಟ್ರಲ್ ಲೈಬ್ರರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದರು. ಕೆಲ ದಿನಗಳಿಂದ ತೀವ್ರ ಹೊಟ್ಟೆ ನೋವಿನ ಸಮಸ್ಯೆ ಬಳಲುತ್ತಿದ್ದರು ಎನ್ನಲಾಗಿದೆ. ಬಹುಶಃ ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ. ಘಟನೆ ಬೆನ್ನಲ್ಲೆ ಕಾನೂನು ಪ್ರಕ್ರಿಯೆಗಳನ್ನು ಮುಗಿಸಿರುವ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
ajjimane ganesh
ಲೇಖಕರ ಬಗ್ಗೆ

ajjimane ganesh

Malenadu Today Contributor