ಜಮೀನು ದಾರಿಗಾಗಿ ಹೊಡದಾಟ | ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ
Shivamogga: A youth was allegedly attacked by a group of people over land dispute in Riponpet police station limits of Hosanagara taluk in Shivamogga district.
SHIVAMOGGA | MALENADUTODAY NEWS | ಮಲೆನಾಡು ಟುಡೆ Nov 27, 2024
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ ಪೇಟೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಜಮೀನು ದಾರಿ ವಿಚಾರಕ್ಕೆ ಪರಸ್ಪರ ಹೊಡೆದಾಟ ನಡೆದು ಯುವಕನೊಬ್ಬನ ಮೇಲೆ ಮಾರಣಾಂತಿಕ ದಾಳಿ ನಡೆಸಿದೆ ಆರೋಪ ಕೇಳಿಬಂದಿದೆ
ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗುಬ್ಬಿಗ (ಅಡ್ಡೆರಿ ) ಗ್ರಾಮದಲ್ಲಿ ಘಟನೆ ನಡೆದಿದ್ದು, ಆದರ್ಶ(22) ಎಂಬಾತ ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳು ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.ಇನ್ನೂ ಪ್ರಕರಣ ದಾಖಲಿಸಿರುವ ಪೊಲೀಶರು ಆರೋಪಿಗಳಿಗಾಗಿ ಹುಡುಕಾಟ ನಡೆಸ್ತಿದ್ದಾರೆ.
ದಿನಾಂಕ 22/11/2024 ರಂದು ಬೆಳಿಗ್ಗೆ ಘಟನೆ ನಡೆದಿದೆ. ತೋಟದಿಂದ ಅಡಿಕೆ ಸಾಗಿಸುತ್ತಿದ್ದ ವೇಳೆ ಆರೋಪಿಗಳು ಈ ದಾರಿಯಲ್ಲಿ ಓಡಾಡುವಂತಿಲ್ಲ ಎಂದು ಕ್ಯಾತೆ ತೆಗೆದಿದ್ದಾರೆ. ಇದೇ ವಿಚಾರಕ್ಕೆ ಪರಸ್ಪರ ಜಗಳವಾಗಿ ಹೊಡೆದಾಟ ನಡೆದಿದೆ. ಈ ವೇಳೆ ಯುವಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ಮಾಡಲಾಗಿದೆ ಎಂದು ದೂರಲಾಗಿದೆ.
SUMMARY |Shivamogga: A youth was allegedly attacked by a group of people over land dispute in Riponpet police station limits of Hosanagara taluk in Shivamogga district.
KEY WORDS | Shivamogga, youth was allegedly attacked by a group , land dispute Riponpet police station limits , Hosanagara taluk , Shivamogga district