ಡ್ರೋಣ್ ಕಣ್ಣಿಗೆ ಸಿಕ್ಕಿಬಿದ್ದ ಜೂಜುಕೋರರು: ಭದ್ರಾವತಿಯಲ್ಲಿ ಶಿವಮೊಗ್ಗ ಪೊಲೀಸರ ಮಿಂಚಿನ ಕಾರ್ಯಾಚರಣೆ!

ಕೊನೆಯ ನವೀಕರಣ: 28 ಏಪ್ರಿಲ್ 2026, 9:27 ಅಪರಾಹ್ನ

ಹಂಚಿಕೊಳ್ಳಿ
WhatsApp Facebook X Telegram
ಡ್ರೋಣ್ ಕಣ್ಣಿಗೆ ಸಿಕ್ಕಿಬಿದ್ದ ಜೂಜುಕೋರರು: ಭದ್ರಾವತಿಯಲ್ಲಿ ಶಿವಮೊಗ್ಗ ಪೊಲೀಸರ ಮಿಂಚಿನ ಕಾರ್ಯಾಚರಣೆ!

ಡ್ರೋಣ್ ಕಣ್ಣಿಗೆ ಸಿಕ್ಕಿಬಿದ್ದ ಜೂಜುಕೋರರು: ಭದ್ರಾವತಿಯಲ್ಲಿ ಶಿವಮೊಗ್ಗ ಪೊಲೀಸರ ಮಿಂಚಿನ ಕಾರ್ಯಾಚರಣೆ! 🚔🚁

ಶಿವಮೊಗ್ಗ ಜಿಲ್ಲೆಯಲ್ಲಿ ಕಾನೂನು ಬಾಹೀರ ಚಟುವಟಿಕೆಗಳಿಗೆ ಬ್ರೇಕ್ ಹಾಕಲು ಪೊಲೀಸರು ಈಗ ಹೈಟೆಕ್ ಕಣ್ಗಾವಲು ಇಟ್ಟಿದ್ದಾರೆ. ಭದ್ರಾವತಿಯ ಕೂಡ್ಲಿಗೆರೆ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದ ಚಾನೆಲ್ ಏರಿಯಾ ಬಳಿ ಡ್ರೋಣ್ ಹಾರಿಸಿದಾಗ, ಅಕ್ರಮವಾಗಿ ಗುಂಪು ಕಟ್ಟಿಕೊಂಡು ಜೂಜಾಟದಲ್ಲಿ ತೊಡಗಿರುವುದು ಕಂಡುಬಂದಿದೆ. ತಕ್ಷಣ ಕಾರ್ಯಪ್ರವೃತ್ತರಾದ ಭದ್ರಾವತಿ ಗ್ರಾಮಾಂತರ ಪೊಲೀಸ್ ನಿರೀಕ್ಷಕರು ಹಾಗೂ ಸಿಬ್ಬಂದಿಯ ತಂಡ ಸ್ಥಳಕ್ಕೆ ದಾಳಿ ನಡೆಸಿ, ಒಟ್ಟು 19 ಜನ ಆರೋಪಿತರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಂತ್ರಜ್ಞಾನದ ಬಳಕೆಯ ಮೂಲಕ ಅಪರಾಧ ಮುಕ್ತ ಜಿಲ್ಲೆಯನ್ನಾಗಿಸಲು ಪೊಲೀಸ್ ಇಲಾಖೆ ಕಟಿಬದ್ಧವಾಗಿದೆ.

#ShivamoggaPolice #Bhadravathi #DroneSurveillance #CrimeControl #KarnatakaPolice #PoliceRaid #LawAndOrder #NoToGambling #Shivamogga #CrimeNews

ಹಂಚಿಕೊಳ್ಳಿ
WhatsApp Facebook X Telegram
malenadumedia@gmail.com
ಲೇಖಕರ ಬಗ್ಗೆ

[email protected]

Malenadu Today Contributor