ಪ್ರತಿ ಹೆಕ್ಟೇರ್​​ಗೆ 50 ಸಾವಿರ ಕೊಡಿ ಸಂಸದರಾದ ಬಿ.ವೈ. ರಾಘವೇಂದ್ರ ಆಗ್ರಹಿಸಿದ್ದಾರೆ.

ಹಂಚಿಕೊಳ್ಳಿ
WhatsApp Facebook X Telegram
ಪ್ರತಿ ಹೆಕ್ಟೇರ್​​ಗೆ 50 ಸಾವಿರ ಕೊಡಿ ಸಂಸದರಾದ ಬಿ.ವೈ. ರಾಘವೇಂದ್ರ ಆಗ್ರಹಿಸಿದ್ದಾರೆ.

ಶಿವಮೊಗ್ಗ ಗ್ರಾಮಾಂತರ ಪ್ರದೇಶದ 35ಕ್ಕೂ ಹೆಚ್ಚು ಗ್ರಾಮಗಳಲ್ಲಿ ಇತ್ತೀಚೆಗೆ ಸುರಿದ ಭಾರಿ ಬಿರುಗಾಳಿ ಹಾಗೂ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಾಶವಾಗಿದ್ದು, ತಕ್ಷಣವೇ ರಾಜ್ಯ ಸರ್ಕಾರವು ಸಂತ್ರಸ್ತ ರೈತರಿಗೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 10 ಸಾವಿರ ಹೆಕ್ಟೇರ್ ಕೃಷಿ ಪ್ರದೇಶದ ಪೈಕಿ ಬರೋಬ್ಬರಿ 5500 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಅಡಿಕೆ ಮರಗಳು ನೆಲಸಮವಾಗಿವೆ ಎಂದು ಕಳವಳ ವ್ಯಕ್ತಪಡಿಸಿದರು.

ಪ್ರಸ್ತುತ ಇರುವ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ನಿಯಮಾವಳಿಗಳ ಅನ್ವಯ ನೀಡುವ ಪರಿಹಾರ ಮೊತ್ತವು ರೈತರ ನಷ್ಟಕ್ಕೆ ಹೋಲಿಸಿದರೆ ಅತ್ಯಲ್ಪವಾಗಿದೆ. ಆದ್ದರಿಂದ ರಾಜ್ಯ ಸರ್ಕಾರವು ವಿಶೇಷವಾಗಿ ಮಧ್ಯಪ್ರವೇಶಿಸಿ, ಪ್ರತಿ ಹೆಕ್ಟೇರ್‌ಗೆ 1 ಲಕ್ಷ ರೂಪಾಯಿ (ಅಂದರೆ ಪ್ರತಿ ಎಕರೆಗೆ ಕನಿಷ್ಠ 50 ಸಾವಿರ ರೂ.) ಪರಿಹಾರ ನೀಡಬೇಕು ಎಂದು ಅವರು ಒತ್ತಾಯಿಸಿದರು.

#Shivamogga, #BYRaghavendra, #FarmersRelief, #ArecaNut, #CropLoss, #RainDamage, #KarnatakaGovernment, #MalenaduToday, #AgricultureNews, #FarmersVoice, #BreakingNewsShivamogga

ಹಂಚಿಕೊಳ್ಳಿ
WhatsApp Facebook X Telegram
malenadumedia@gmail.com
ಲೇಖಕರ ಬಗ್ಗೆ

[email protected]

Malenadu Today Contributor