SHIVAMOGGA NEWS TODAY

ಸಾಗರ: ಅಂಬೇಡ್ಕರ್ ವೃತ್ತದ ಬಳಿ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹಾರಿದ ಕಾರು; ಸಿಸಿಟಿವಿಯಲ್ಲಿ ದೃಶ್ಯ ಸೆರೆ

[email protected] ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಸಾಗರ: ನಗರದ ಹೃದಯಭಾಗವಾದ ಮಾರುಕಟ್ಟೆ ರಸ್ತೆಯ ಅಂಬೇಡ್ಕರ್ ವೃತ್ತದ ಬಳಿ ಬುಧವಾರ ಸಂಜೆ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಚಾಲಕನ ಹತೋಟಿ ತಪ್ಪಿದ ಕಾರೊಂದು  ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ.

ಶಿವಮೊಗ್ಗ: ವಿಚಾರಣಾಧೀನ ಕೈದಿಗೆ ಕೊಡಲು ತಿಂಡಿ ಹಾಗೂ ಬ್ಲಾಂಕೇಟ್​ ತಂದಿದ್ರು, ಚೆಕ್​ ಮಾಡಿದಾಗ ಅದರಲ್ಲಿ ಇದ್ದಿದ್ದೇ ಬೇರೆ

ಸೊರಬ ರಸ್ತೆಯ ಕಡೆಯಿಂದ ಅತಿ ವೇಗವಾಗಿ ಬಂದ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದ ಡಿವೈಡರ್ ಮೇಲೆ ಹಾರಿದೆ. ಅಷ್ಟಕ್ಕೇ ನಿಲ್ಲದ ಕಾರು, ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನಕ್ಕೆ ಬಲವಾಗಿ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ವಾಹನಗಳು ಸಂಪೂರ್ಣ ಜಖಂಗೊಂಡಿದ್ದು, ಜನದಟ್ಟಣೆ ಇರುವ ಪ್ರದೇಶವಾದ್ದರಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ವಾಹನ ಸವಾರರು ಮತ್ತು ಪಾದಚಾರಿಗಳು ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದಾರೆ. ಈ ಭೀಕರ ಅಪಘಾತದ ದೃಶ್ಯಗಳು ಸಮೀಪದ ಮಳಿಗೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾಗರ ನಗರಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

#Sagara, #RoadAccident, #AmbedkarCircle, #CCTVFootage, #MalenaduToday, #BreakingNews, #SafeDriving.

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು: