ಶಿವಮೊಗ್ಗಕ್ಕೆ 200 ಕೋಟಿ ಸಚಿವರು ತಿಳಿಸಿದ, ಸ್ಮಾರ್ಟ್ ಸಿಟಿ ಸೀಕ್ರೆಟ್

ಕೊನೆಯ ನವೀಕರಣ: 04 ಮೇ 2026, 7:09 ಫೂರ್ವಾಹ್ನ

ಹಂಚಿಕೊಳ್ಳಿ
WhatsApp Facebook X Telegram
ಶಿವಮೊಗ್ಗಕ್ಕೆ 200 ಕೋಟಿ ಸಚಿವರು ತಿಳಿಸಿದ, ಸ್ಮಾರ್ಟ್ ಸಿಟಿ ಸೀಕ್ರೆಟ್

ಶಿವಮೊಗ್ಗಕ್ಕೆ 200 ಕೋಟಿ

ಸಚಿವರು ತಿಳಿಸಿದ, ಸ್ಮಾರ್ಟ್ ಸಿಟಿ ಸೀಕ್ರೆಟ್

ಮಲೆನಾಡು ಟುಡೆ ಸುದ್ದಿ / ಶಿವಮೊಗ್ಗ / ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯ ಅಡಿಯಲ್ಲಿ ಮಹಾನಗರ ಪಾಲಿಕೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಸುಮಾರು 200 ಕೋಟಿ ರೂಪಾಯಿಗಳ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯದ ಒಟ್ಟು 13 ಮಹಾನಗರ ಪಾಲಿಕೆಗಳಿಗೆ 2600 ಕೋಟಿ ರೂಪಾಯಿಗಳನ್ನು ಒದಗಿಸಲಾಗಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಕಾಮಗಾರಿಗಳನ್ನು ಆರಂಭಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿಗಳ ಗುದ್ದಲಿಪೂಜೆ ನೆರವೇರಿಸಲು ತಾವು ಆಗಮಿಸಿರುವುದಾಗಿ ತಿಳಿಸಿದರು.

ಸ್ಮಾರ್ಟ್ ಸಿಟಿ ಯೋಜನೆಯಡಿ ಹಲವು ಕೆಲಸಗಳು ನಡೆದಿದ್ದರೂ, ನಗರದಲ್ಲಿ ಇನ್ನೂ ಹತ್ತು ಹಲವು ಕಾಮಗಾರಿಗಳು ಬಾಕಿ ಉಳಿದಿವೆ. ಅಭಿವೃದ್ಧಿ ಎಂಬುದು ನಿರಂತರವಾಗಿ ನಡೆಯುವ ಪ್ರಕ್ರಿಯೆಯಾಗಿದ್ದು, ನಗರವನ್ನು ಇನ್ನಷ್ಟು ಸುಂದರಗೊಳಿಸಲು ಎಲ್ಲಾ ಶಾಸಕರಿಗೂ ಸಮಾನವಾಗಿ ಅನುದಾನವನ್ನು ಹಂಚಿಕೆ ಮಾಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರವು ಸರ್ವೇಜನ ಸುಖಿನೋಭವಂತು ಎಂಬ ಉದಾತ್ತ ತತ್ವದ ಆಧಾರದ ಮೇಲೆ ಆಡಳಿತ ನಡೆಸುತ್ತಿದೆ. ಶಾಸಕರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದವರಾಗಿದ್ದರೂ ಯಾವುದೇ ತಾರತಮ್ಯ ಮಾಡದೆ ಎಲ್ಲರಿಗೂ ಸಮಾನವಾಗಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳು ಹಾಗೂ ಅನುದಾನ ತಲುಪಬೇಕು ಎಂಬುದು ನಮ್ಮ ಗುರಿಯಾಗಿದೆ ಎಂದು ಸಚಿವರು ತಿಳಿಸಿದರು.

BS Suresh in Shivamogga, MLA SN Channabasappa, Karnataka Politics, Shivamogga News, Minister BS Suresh, Political Conversation, #ShivamoggaPolitics #BSSuresh #SNChannabasappa #DevelopmentPolitics #Bommanakatte #ShivamoggaUpdates #PoliticalCamaraderie #Trend #ViralPolitics

ಹಂಚಿಕೊಳ್ಳಿ
WhatsApp Facebook X Telegram
malenadumedia@gmail.com
ಲೇಖಕರ ಬಗ್ಗೆ

[email protected]

Malenadu Today Contributor