SHIVAMOGGA NEWS TODAY

ಹೆಲ್ಮೆಟ್​ ಹಾಕದೆ ವಾಗ್ವಾದಕ್ಕೆ ಇಳಿದ್ರು, ಪೊಲೀಸರ ಬೈಕ್ ಕೀ ಅನ್ನೇ ಕಿತ್ತುಕೊಂಡು ಬೆದರಿಕೆ ಹಾಕಿದ್ರು,

[email protected] ನವೀಕರಣ: 06 ಮೇ 2026, 7:47 ಫೂರ್ವಾಹ್ನ ಅಥಾರಿಟಿ: ಮಲೆನಾಡು ಟುಡೆ ಡೆಸ್ಕ್

ಹೆಲ್ಮೆಟ್​ ಹಾಕದೆ ವಾಗ್ವಾದಕ್ಕೆ ಇಳಿದ್ರು, ಪೊಲೀಸರ ಬೈಕ್ ಕೀ ಅನ್ನೇ ಕಿತ್ತುಕೊಂಡು ಬೆದರಿಕೆ ಹಾಕಿದ್ರು, ಆಮೇಲೆ ಏನಾಯ್ತು?

ಶಿವಮೊಗ್ಗ: ನಗರದ ಗಾಂಧಿ ಬಜಾರ್ ನಲ್ಲಿ ಸಂಚಾರಿ ನಿಯಮ ಉಲ್ಲಂಘಿಸಿದ್ದನ್ನು ಪ್ರಶ್ನಿಸಿದ ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿ, ಸರ್ಕಾರಿ ಕೆಲಸಕ್ಕೆ ಅಡ್ಡಿಪಡಿಸಿದ ಇಬ್ಬರು ವ್ಯಕ್ತಿಗಳನ್ನು ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ

ಮೇ 04 ರ ಸೋಮವಾರ ಬೆಳಿಗ್ಗೆ, ಪೂರ್ವ ಸಂಚಾರ ಪೊಲೀಸ್ ಠಾಣೆಯ ಎಎಸ್ಐ ಮಂಜುನಾಥ್ ಮತ್ತು ಸಿಪಿಸಿ ಸಂತೋಷ್ ಅವರು ಗಾಂಧಿ ಬಜಾರ್‌ನಲ್ಲಿ ಸಂಚಾರ ನಿಯಂತ್ರಣ ಕರ್ತವ್ಯದಲ್ಲಿದ್ದರು. ಈ ವೇಳೆ ಹೆಲ್ಮೆಟ್​​ ಧರಿಸದೆ ಸಂಚಾರಿ ನಿಯಮ ಉಲ್ಲಂಘಿಸಿ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ಸಯ್ಯದ್ ಮುಜಾಮಿಲ್ ಎಂಬಾತನನ್ನು ತಡೆದ ಪೊಲೀಸರು, ಸುರಕ್ಷತೆಯ ದೃಷ್ಟಿಯಿಂದ ಹೆಲ್ಮೆಟ್ ಧರಿಸುವಂತೆ ಸೂಚನೆ ನೀಡಿದ್ದಾರೆ.

ನಿಯಮ ಪಾಲಿಸುವಂತೆ ಹೇಳಿದ ಅಧಿಕಾರಿಗಳ ಜೊತೆ ಸಯ್ಯದ್ ಮುಜಾಮಿಲ್ ರಸ್ತೆಯ ಮಧ್ಯೆಯೇ ವಾಗ್ವಾದಕ್ಕಿಳಿದಿದ್ದಾನೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಜಬಿವುಲ್ಲಾ ಎಂಬಾತನು ಸೇರಿಕೊಂಡು, ನಾವು ಹೆಲ್ಮೆಟ್ ಹಾಕುವುದಿಲ್ಲ, ನೀವು ಏನು ಮಾಡುತ್ತೀರಾ? ಎಂದು ಅವಾಚ್ಯವಾಗಿ ಮಾತನಾಡಿದ್ದಾರೆ. ಅಷ್ಟಕ್ಕೇ ನಿಲ್ಲದೆ, ಸಮವಸ್ತ್ರದಲ್ಲಿದ್ದ ಅಧಿಕಾರಿಗಳನ್ನು ದೂಡಿ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.

ಬಳಿಕ ಬೈಕ್ ಕೀ ಕಿತ್ತುಕೊಂಡು ಪೊಲೀಸರಿಗೆ ಬೆದರಿಕೆ ಹಾಕಿ ಪರಾರಿಯಾಗಲು ಯತ್ನಿಸಿದ ಆರೋಪಿಗಳ ವಿರುದ್ಧ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಯ್ಯದ್ ಮುಜಾಮಿಲ್ ಮತ್ತು ಜಬಿವುಲ್ಲಾ ಎಂಬಿಬ್ಬರನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ. ಆರೋಪಿಗಳ ವಿರುದ್ದ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

#ShivamoggaNews #PoliceDuty #TrafficRules #GandhiBazaar #CrimeNews #KarnatakaPolice #PublicAwareness #ShimogaUpdate #LegalAction #RoadSafety #NammaShivamogga

Related News

🔔 Breaking News Alerts

ತಾಜಾ ಸುದ್ದಿಗಳನ್ನು ಮೊದಲು ಪಡೆಯಲು ನಮ್ಮ ನೋಟಿಫಿಕೇಶನ್ ಸೇವೆಯನ್ನು ಸಬ್‌ಸ್ಕ್ರೈಬ್ ಮಾಡಿ.

END OF STORY
ಮಲೆನಾಡು ಟುಡೆ ಫಾಲೋ ಮಾಡಿ

ತಾಜಾ ಸ್ಥಳೀಯ ಸುದ್ದಿಗಳಿಗಾಗಿ ನಮ್ಮ ಅಧಿಕೃತ ಚಾನೆಲ್‌ಗಳಿಗೆ ಸೇರಿ.

ಇತ್ತೀಚಿನ ವೀಡಿಯೊಗಳು
ಟ್ಯಾಗ್‌ಗಳು: