🚨 ಹೆಣ್ಣುಮಕ್ಕಳ ಪೋಷಕರು ಈ ವಿಡಿಯೋ ಮಿಸ್ ಮಾಡ್ಬೇಡಿ! | ಗರ್ಭಕೋಶ ಕಂಠದ ಕ್ಯಾನ್ಸರ್ ತಡೆಗೆ ಉಚಿತ ಲಸಿಕೆ | Dr. Geetha

🚨 ಹೆಣ್ಣುಮಕ್ಕಳ ಪೋಷಕರು ಈ ವಿಡಿಯೋ ಮಿಸ್ ಮಾಡ್ಬೇಡಿ! | ಗರ್ಭಕೋಶ ಕಂಠದ ಕ್ಯಾನ್ಸರ್ ತಡೆಗೆ ಉಚಿತ ಲಸಿಕೆ | Dr. Geetha

ಮಹಿಳೆಯರಲ್ಲಿ ಅತಿ ಹೆಚ್ಚು ಕಂಡುಬರುವ ಮಾರಕ ‘ಗರ್ಭಕೋಶ ಕಂಠದ ಕ್ಯಾನ್ಸರ್’ (Cervical Cancer) ತಡೆಗಟ್ಟಲು ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ಹೆಜ್ಜೆ ಇಟ್ಟಿದೆ. ಈ ಲಸಿಕೆಯ ಬಗ್ಗೆ ಮೆಗ್ಗಾನ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಗೀತಾ ಎಂ. ಅವರು ನೀಡಿರುವ ಪೂರ್ಣ ಮಾಹಿತಿ ಇಲ್ಲಿದೆ.

ಪ್ರಮುಖ ಅಂಶಗಳು:

ಮಹಿಳೆಯರಲ್ಲಿ ಕಂಡುಬರುವ ಕ್ಯಾನ್ಸರ್‌ಗಳಲ್ಲಿ ಇದು ಎರಡನೇ ಸ್ಥಾನದಲ್ಲಿದೆ.

9 ರಿಂದ 15 ವರ್ಷದ ಒಳಗಿನ ಎಲ್ಲಾ ಹೆಣ್ಣುಮಕ್ಕಳು ಈ ಲಸಿಕೆಯನ್ನು ಕಡ್ಡಾಯವಾಗಿ ಪಡೆಯಬೇಕು.

ಈ ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮಗಳಿಲ್ಲ.

ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಇದು ಸಂಪೂರ್ಣ ಉಚಿತವಾಗಿ ಲಭ್ಯವಿದೆ.

ಹೆಣ್ಣುಮಕ್ಕಳ ಭವಿಷ್ಯವನ್ನು ಸುರಕ್ಷಿತಗೊಳಿಸಲು ಇಂದೇ ಈ ಲಸಿಕೆ ಕೊಡಿಸಿ.

ನಮ್ಮ ಮಲೆನಾಡು ಟುಡೆಯ ವಿಡಿಯೋಗಳನ್ನು ನೀವಿಲ್ಲಿ ನೋಡಬಹುದು: https://www.youtube.com/shorts/x8I63rpLvyw